ಮಡಿಕೇರಿ, ಜು. 8: ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಸಾರ್ವಜನಿಕ ಶಿಕ್ಷಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಯುವ ವಿಜ್ಞಾನಿ ಪ್ರಶಸ್ತಿಗೆಗಾಗಿ ಪ್ರಸ್ತುತ 9 ರಿಂದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾಮಟ್ಟದ ಯುವ ವಿಜ್ಞಾನಿಗಳ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ತಾ. 27 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಬಳಿಯ ಬಿ.ಆರ್.ಸಿ. ಕೇಂದ್ರದಲ್ಲಿ ಜರುಗಲಿದೆ.
ಈ ಸ್ಪರ್ಧೆಗೆ ವಿಜ್ಞಾನ ಚಟುವಟಿಕೆಗಳು/ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರಿದ ವಿದ್ಯಾರ್ಥಿಗಳನ್ನು ಆಯ್ದು ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಗುವದು.
ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಮಡಿಕೇರಿ ನಗರದ ಡಿಡಿಪಿಐ ಕಚೇರಿಯಿಂದ ನಿಗದಿತ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅದರೊಂದಿಗೆ ಹಿಂದಿನ 3 ವರ್ಷಗಳ ತರಗತಿಯಿಂದ ವಿಜ್ಞಾನ ಮತ್ತು ಗಣಿತಕ್ಕೆ ಸಂಬಂಧಿಸಿದ ಚಟುವಟಿಕೆ, ಪ್ರತಿಭಾ ಕಾರಂಜಿ, ವಿಜ್ಞಾನ ಸ್ಪರ್ಧೆ ಇತ್ಯಾದಿಗಳಲ್ಲಿ ಭಾಗವಹಿಸಿ ಪಡೆದಿರುವ ಪ್ರಶಸ್ತಿ, ಸನ್ಮಾನ ಪತ್ರ ಇತ್ಯಾದಿಗಳನ್ನು 2 ಭಾವಚಿತ್ರಗಳೊಂದಿಗೆ ಶಾಲಾ-ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿದ ಜೆರಾಕ್ಸ್ ಪ್ರತಿಗಳೊಂದಿಗೆ ಸಲ್ಲಿಸಬೇಕು.
ಜಿಲ್ಲಾ ಹಂತದಲ್ಲಿ ಸಲ್ಲಿಸುವ ಅರ್ಜಿಯ ಒಂದು ಜೆರಾಕ್ಸ್ ಪ್ರತಿಯನ್ನು (ಎಲ್ಲಾ ದಾಖಲಾತಿಗಳೊಂದಿಗೆ) ಅಂಚೆ/ ಕೋರಿಯರ್ ಮೂಲಕ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, (ಯುವ ವಿಜ್ಞಾನಿ ವಿಭಾಗ), ವಿಜ್ಞಾನ ಭವನ, ನಂ: 24/2, 21 ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-560070 ಇವರಿಗೆ ಅರ್ಜಿಯನ್ನು ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಎಸ್.ಟಿ. ವೆಂಕಟೇಶ್, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರು, ಡಿಡಿಪಿಐ ಕಚೇರಿ, ಮಡಿಕೇರಿ (ಮೊ. 94488 73999), ಕೆ.ಯು. ರಂಜಿತ್, ಸಹ ಸಂಯೋಜಕರು (ಮೊ. 94821 92964) ಅಥವಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ. ಪ್ರೇಮಕುಮಾರ್ (ಮೊ. 94485 88352) ಅವರನ್ನು ಸಂಪರ್ಕಿಸಲು ತಿಳಿಸಲಾಗಿದೆ.