ಕೂಡಿಗೆ, ಜು. 8: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿ ಬಯಲು ರಂಗಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯಿತು. ಕೂಡಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜಳಾ ಅವರ ಅನುದಾನದಲ್ಲಿ ಹಾರಂಗಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬಯಲು ರಂಗ ಮಂದಿರ ನಿರ್ಮಾಣಕ್ಕೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಭಾಸ್ಕರ್ ನಾಯಕ್ ಭೂಮಿಪೂಜೆ ನರೆವೇರಿಸಿದರು.

ಈ ಸಂದರ್ಭ ಸ್ಥಳೀಯ ಪ್ರಮುಖರಾದ ತಿಮ್ಮಪ್ಪ, ಭರತ್ ಮಾಚಯ್ಯ, ಚೌಡಪ್ಪ, ಸ್ವಾಮಿ, ಗಿರೀಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.