ಸೋಮವಾರಪೇಟೆ, ಜು.8: ಕುಶಾಲನಗರ ತಾಲೂಕು ರಚನೆಯ ಬಗ್ಗೆ ಚುನಾಯಿತ ಜನಪ್ರತಿನಿಧಿಗಳು, ತಾಲೂಕು ರಚನೆ ಹೋರಾಟ ಸಮಿತಿ ಪದಾಧಿಕಾರಿಗಳು ಮತ್ತು ಅಧಿಕಾರಿಗಳ ಸಮಾಲೋಚನಾ ಸಭೆಯನ್ನು ತಾ. 9ರ ಮಂಗಳವಾರ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಸಭೆಯನ್ನು ಮುಂದೂಡಲಾಗಿದೆ ಎಂದು ತಹಶೀಲ್ದಾರ್ ಗೋವಿಂದರಾಜು ತಿಳಿಸಿದ್ದಾರೆ.