ಸೋಮವಾರಪೇಟೆ, ಜು. 8: ಇಲ್ಲಿನ ಸ್ತ್ರೀಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಚೈಲ್ಡ್ ಲೈನ್ ಸಂಸ್ಥೆಯ ಸಹಯೋಗದೊಂದಿಗೆ ಅಂಗನವಾಡಿ ಕಾರ್ಯಕರ್ತೆ ಯರಿಗೆ ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಬಾಲ್ಯ ವಿವಾಹ ತಡೆ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದಲ್ಲಿ ಚೈಲ್ಡ್ ಲೈನ್ ಸಂಸ್ಥೆಯ ಜಿಲ್ಲಾ ಸಂಯೋಜಕ ನವೀನ್ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿ ಯಾಗಿ ತಡೆಯುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರದ ಶಿಕ್ಷಕಿಯರಿಗೆ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ ಎಂದರು.

17 ವರ್ಷದೊಳಗಿನ ಯುವತಿ ಹಾಗೂ 21 ವರ್ಷದೊಳಗಿನ ಯುವಕನ ವಿವಾಹವು ಬಾಲ್ಯವಿವಾಹವಾಗುವದು. ಇದು ರುಜುವಾತಾದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ದೂರು ದಾಖಲಾಗುವದು. ಪೋಷಕರ ಮೇಲೂ ಕಾನೂನು ಕ್ರಮ ತೆಗೆದುಕೊಳ್ಳಲಾಗುವದು ಎಂದರು.

ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಮೇಲ್ವಿಚಾರಕಿ ನಿರ್ಮಲಾ ಕುರಬೇಟ್, ಮೈಸೂರಿನ ಪ್ರಥಮ್ ಸಂಸ್ಥೆಯ ಸಂಚಾಲಕಿ ಸರಸ್ವತಿ, ಚೈಲ್ಡ್ ಲೈನ್ ಸಂಸ್ಥೆಯ ಕುಮಾರಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.