ಸೋಮವಾರಪೇಟೆ, ಜು. 8: ಎಳೆಯ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿಯೇ ಕಲಿಕೆಯೊಂದಿಗೆ ಗ್ರಹಿಕಾ ಸಾಮಥ್ರ್ಯವನ್ನು ಹೆಚ್ಚಿಸಲು ಪ್ರಯತ್ನಿಸಬೇಕು. ಹೀಗಾದಲ್ಲಿ ಭವಿಷ್ಯದ ಕಲಿಕೆಗೆ ಸುಲಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ನಿರ್ಮಲಾ ಅಭಿಪ್ರಾಯಿಸಿದರು. ಇಲ್ಲಿನ ಸ್ತ್ರೀಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಮೈಸೂರಿನ ಪ್ರಥಮ್ ಸಂಸ್ಥೆಯ ಸಹಯೋಗದೊಂದಿಗೆ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಆಯೋಜಿಸಿದ್ದ ಶಾಲಾ ಪೂರ್ವ ಶಿಕ್ಷಣ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರಿನ ಪ್ರಥಮ್ ಸಂಸ್ಥೆಯ ಸಂಚಾಲಕಿ ಸರಸ್ವತಿ ಮಾತನಾಡಿ, ಮಕ್ಕಳಲ್ಲಿ ಕಲಿಕೆಯ ಮಟ್ಟವನ್ನು ವೃದ್ಧಿಸಲು ಅಗತ್ಯ ಕ್ರಮ ಹಾಗೂ ಅನುಸರಿಸಬೇಕಾದ ವಿಧಾನವನ್ನು ತಿಳಿಹೇಳಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಗೌಡಳ್ಳಿ ವೃತ್ತದ ತಾರಾ ಲೋಬೋ, ಶಾಂತಳ್ಳಿ ವೃತ್ತದ ಶಾರದ ಹಾಗೂ ಮಾದಾಪುರ ವೃತ್ತದ ಭಾಗ್ಯ ಕಾರ್ಯನಿರ್ವಹಿಸಿದರು.