ಮಡಿಕೇರಿ, ಜು. 12: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಚೇರಂಬಾಣೆಯಲ್ಲಿ ನಡೆಯಲಿರುವ ಹತ್ತನೇ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಾಜಿ ಯೋಧ, ಹಿರಿಯ ಸಾಹಿತಿ ಮೂರ್ನಾಡು ಬಳಿಯ ಕಿಗ್ಗಾಲು ಗಿರೀಶ್ ಅವರು ಆಯ್ಕೆಯಾಗಿದ್ದಾರೆ.ಕ.ಸಾ.ಪ ಕಚೇರಿಯಲ್ಲಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಗಿರೀಶ್ ಅವರನ್ನು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಹತ್ತನೇ ಸಾಹಿತ್ಯ ಸಮ್ಮೇಳನವು ಚೇರಂಬಾಣೆ ಗ್ರಾಮಸ್ಥರ ಸಹಕಾರದೊಂದಿಗೆ ಇದೇ ತಾ.31ರಂದು ಚೇರಂಬಾಣೆ ಕೊಡವ ಸಮಾಜದಲ್ಲಿ ನಡೆಯಲಿದೆ.