ನಾಪೆÇೀಕ್ಲು, ಜು. 12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಹೂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಇಂದಿರಾ ವಹಿಸಿದ್ದರು. ಈ ಸಂದರ್ಭ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಕೋಳೆರ ದಯಾ ಚಂಗಪ್ಪ, ಸಂಘದ ಯೋಜನಾಧಿಕಾರಿ ಸದಾಶಿವ ಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರನಾರಾಯಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನಿಶ್ಮಾ, ಕೃಷಿ ಮೇಲ್ವಿಚಾರಕರಾದ ಚೇತನ್, ಶ್ರೀನಿವಾಸ್, ಸೇವಾ ಪ್ರತಿನಿಧಿಗಳಾದ ರೋಹಿಣಿ, ಕುಮಾರಿ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಇದ್ದರು.