ಮಡಿಕೇರಿ, ಜು. 13: ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಹೊಸದಾಗಿ ಖರೀದಿಸಿರುವ ಆ್ಯಂಬುಲೆನ್ಸ್‍ಗಳನ್ನು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಕಿರಣ್ ಕಾರ್ಯಪ್ಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಿದರು.

ನೂತನ ಆ್ಯಂಬುಲೆನ್ಸ್‍ಗಳನ್ನು ಗೋಣಿಕೊಪ್ಪ ಮತ್ತು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗಳಿಗೆ ಕಲ್ಪಿಸಲಾಗುವದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ತಿಳಿಸಿದರು.

ಜಿ.ಪಂ. ಸದಸ್ಯರಾದ ಎಂ.ಪಿ. ಸುಬ್ರಮಣಿ, ಮುರಳಿ ಕರುಂಬಮಯ್ಯ, ಯಲದಾಳು ಪದ್ಮಾವತಿ, ಜಿ.ಪಂ. ಸಿಇಒ ಕೆ. ಲಕ್ಷ್ಮಿಪ್ರಿಯಾ, ಉಪ ಕಾರ್ಯದರ್ಶಿ ಗುಡೂರು ಭೀಮಸೇನಾ ಇತರರು ಇದ್ದರು.