ಮಡಿಕೇರಿ, ಜು. 13: ಕೊಡಗು ಜಿ.ಪಂ., ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿಯ ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆ.10 ರಂದು ಕಗ್ಗೋಡ್ಲು ಗ್ರಾಮದ ದಿ. ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ರಾಜ್ಯಮಟ್ಟದ ಮುಕ್ತ ಕೆಸರುಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆ ಗಳನ್ನು ಆಯೋಜಿಸಲು ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಒಕ್ಕೂಟದ ತಾಲೂಕು ಅಧ್ಯಕ್ಷ ನವೀನ್ ದೇರಳ ಹಾಗೂ ಕಾರ್ಯದರ್ಶಿ ಬಾಳಾಡಿ ದಿಲೀಪ್ ಅವರು 28 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಾಲಿಬಾಲ್, ಹಗ್ಗಜಗ್ಗಾಟ, ಥ್ರೋಬಾಲ್ ಹಾಗೂ ಇನ್ನಿತರ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ, ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವದು. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳು ಹೆಸರು ನೋಂದಾಯಿಸಲು ಆಗಸ್ಟ್ 9 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 9449952008, 9480674546, 9481213920 ಸಂಪರ್ಕಿಸಬಹುದಾಗಿದೆ.