ನಾಪೆÇೀಕು, ಜು. 13: ನಾಪೆÇೀಕ್ಲು ತೋಟಗಾರಿಕ ಇಲಾಖೆಯ ಬಳಿಯಿಂದ ಬೇತು ಗ್ರಾಮಕ್ಕಾಗಿ ನಾಪೆÇೀಕ್ಲು ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ತೀರ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ದುಸ್ತರವಾಗಿದೆ, ಈ ರಸ್ತೆಯಲ್ಲಿ ಆಟೋರಿಕ್ಷಾ ಮತ್ತು ಲಘು ವಾಹನಗಳ ಸಂಚಾರಕ್ಕೆ ಕಷ್ಟವಾಗಿದೆ ಎಂದು ವಾಹನ ಮಾಲೀಕರ ಮತ್ತು ಚಾಲಕರ ಸಂಘ ಆರೋಪಿಸಿದೆ. ಕೂಡಲೇ ಸಂಬಂಧಪಟ್ಟವರು ರಸ್ತೆಯ ಗುಂಡಿಯನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಂಬಂಧಿಸಿದವರನ್ನು ಒತ್ತಾಯಿಸಿದೆ.