ಸೋಮವಾರಪೇಟೆ, ಜು. 13: ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ, ಡಾ. ವಿ.ಕೃ. ಗೋಕಾಕ ರಾಷ್ಟ್ರೀಯ ಕಲಾ ಪ್ರತಿಭೋತ್ಸವ ಮತ್ತು ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಆಶ್ರಯದಲ್ಲಿ, ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ನೃತ್ಯಕಲಾ ಪ್ರದರ್ಶನ ಸ್ಪರ್ಧೆಯಲ್ಲಿ ಇಲ್ಲಿನ ಅಡ್ವೆಂಚರ್ಸ್ ಡ್ಯಾನ್ಸ್ ಸ್ಟುಡಿಯೋದ ಕಲಾ ತಂಡ ಪ್ರಥಮ ಸ್ಥಾನ ಪಡೆದಿದೆ.

ಕಲಾ ತಂಡದ ಸದಸ್ಯರು, ಪ್ರಥಮ ಸ್ಥಾನದೊಂದಿಗೆ ‘ರಾಷ್ಟ್ರೀಯ ಕಲಾ ಜ್ಯೋತಿ’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.