ಕುಶಾಲನಗರ, ಜು. 13: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಕುಶಾಲನಗರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾನಸಿಕ ಆರೋಗ್ಯದ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು.
ಮಡಿಕೇರಿ ಜಿಲ್ಲಾಸ್ಪತ್ರೆ ಮಾನಸಿಕ ತಜ್ಞ ಡಾ.ರಾಜಶೇಖರ್ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ತರಬೇತಿ ನೀಡಿದರು. ಗ್ರಾಮೀಣ ಪ್ರದೇಶದಲ್ಲಿನ ಮಾನಸಿಕ ರೋಗಿಗಳನ್ನು ಪತ್ತೆ ಹಚ್ಚುವ ಮೂಲಕ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಆಶಾ ಕಾರ್ಯಕತೆರ್Àಯರು ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಜಿಲ್ಲಾಸ್ಪತ್ರೆಯ ಮನೋ ವೈದ್ಯ ಡಾ. ಡೇವಿನ್, ಮಾನಸಿಕ ಆರೋಗ್ಯದ ಸಾಮಾಜಿಕ ಕಾರ್ಯ ಕರ್ತ ಶಿವಕುಮಾರ್, ತಾಲೂಕು ಆಶಾ ಕಾರ್ಯಕರ್ತರ ಮೇಲ್ವಿಚಾರಕಿ ದೀಪಾ, ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಇದ್ದರು.