ಮಡಿಕೇರಿ, ಜು. 13: ಚೇರಂಬಾಣೆ ಸಮೀಪದ ಕೋಪಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನಿವೃತ್ತ ವ್ಯವಸ್ಥಾಪಕ ಕೋಪಟ್ಟಿಯ ಕೊಟ್ಟುಕತ್ತಿರ ಸೋಮಣ್ಣ ಜಾಲಿ ಅವರು ಪ್ರತಿ ವರ್ಷದಂತೆ ಈ ಬಾರಿಯು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಪುಸ್ತಕ ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಿದರು.

ಕಳೆದ ಒಂಭತ್ತು ವರ್ಷಗಳಿಂದ ಸೋಮಣ್ಣ ಅವರು ಈ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸುತ್ತಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆಂದು ಶಾಲೆಯ ಮುಖ್ಯ ಶಿಕ್ಷಕಿ ಬಿ.ಎನ್. ಜಯಂತಿ ಪ್ರಶಂಶಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಎಸ್. ಪ್ರದೀಪ್ ಮತ್ತು ಮಕ್ಕಳ ಪೋಷಕರು ಶಾಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಜಯಂತಿ ಅವರು ಸ್ವಾಗತಿಸಿದರು. ಸಹ ಶಿಕ್ಷಕಿ ಯು.ಪಿ. ಸರೋಜ ವಂದಿಸಿದರು.