ಕೂಡಿಗೆ, ಜು. 13 : ತೊರೆನೂರಿನಲ್ಲಿ ಚಿಕುಂಗುನ್ಯ ಶಂಕೆ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ಶಿರಂಗಾಲ, ಕೂಡಿಗೆ, ಹೆಬ್ಬಾಲೆಯ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಸಹಾಯಕರು ತೊರೆನೂರಿನಲ್ಲಿ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದ್ದವರನ್ನು ತಪಾಸಣೆ ನಡೆಸುತ್ತಿದ್ದಾರೆ. ಸಾಂಕ್ರಾಮಿಕ ರೋಗವು ಹೆಚ್ಚಾಗಿದ್ದ ಆರು ಮಂದಿಯ ರಕ್ತವನ್ನು ಪಡೆದು ಜಿಲ್ಲಾಸ್ಪತ್ರೆಗೆ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಬ್ಬಾಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಯೋಗಾಲಯದಲ್ಲಿ ರಕ್ತವನ್ನು ತೆಗೆದು ಪರೀಕ್ಷಿಸಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.