ವೀರಾಜಪೇಟೆ, ಜು. 14: ಮೂರ್ನಾಡು ಮಾರುತಿ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ ಕುರಿತಂತೆ ಒಂದು ದಿನದ ಮಾರ್ಗದರ್ಶನ ತರಬೇತಿ ಕಾರ್ಯಾಗಾರ ನಡೆಯಿತು. ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಕಲ್ಪನಾ ವಿದ್ಯಾರ್ಥಿಗಳಿಗೆ ನಿತ್ಯದ ದಿನಚರಿ, ಸಾಧನೆಯ ಹಾದಿಯಲ್ಲಿ ಅನುಸರಿಸ ಬೇಕಾದ ಕ್ರಮದ ಬಗ್ಗೆ ಮಾಹಿತಿ ನೀಡಿದಲ್ಲದೆ, ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಕಿವಿಮಾತು ಹೇಳಿದರು. ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಸಪ್ನ ಸುಬ್ಬಯ್ಯ ಮತ್ತು ಶಿಕ್ಷಕರು ಹಾಜರಿದ್ದರು.