ವೀರಾಜಪೇಟೆ, ಜು.14: ವೀರಾಜಪೇಟೆ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನವು ತಾ. 29ರಂದು ಅರಮೇರಿ ಕಳಂಚೇರಿ ಮಠದ ಲಿಂಗರಾಜೇಂದ್ರ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಾ. 15 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಅರಮೇರಿ ಕಳಂಚೇರಿ ಮಠದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.