ಕೂಡಿಗೆ, ಜು. 14: ಸರ್ಕಾರಿ ಪದವಿಪೂರ್ವ ಕಾಲೇಜು ಶಿರಂಗಾಲ ಪ್ರೌಢಶಾಲಾ ವಿಭಾಗದಲ್ಲಿ ಆದರ್ಶ ವಿದ್ಯಾರ್ಥಿ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು.
ಕಾಲೇಜು ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್, ಸರ್ಕಾರಿ ಪ್ರೌಢಶಾಲೆಗಳಿಗೆ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಸರ್ಕಾರ ಒದಗಿಸಿಕೊಟ್ಟಿರುವದು ಒಳ್ಳೆಯ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಪ್ರೌಢಶಾಲಾ ಹಂತದಲ್ಲಿಯೇ ಸ್ವಚ್ಛತೆ, ನೀರಿನ ಸದ್ಬಳಕೆ, ನಾಯಕತ್ವದ ಗುಣ, ಮಾನವೀಯ ಮೌಲ್ಯಗಳನ್ನು ಬೆಳೆಸಿ ಸದೃಢ ಭಾರತವನ್ನು ನಿರ್ಮಾಣ ಮಾಡಲು ಎನ್‍ಎಸ್‍ಎಸ್ ಸಹಕಾರಿಯಾಗಿದೆ ಎಂದರು.
ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಎಸ್. ರಮೇಶ್ ಮಾತನಾಡಿದರು. ಪ್ರಜಾಪ್ರಭುತ್ವದ ಮಾದರಿಯಲ್ಲಿ ಚುನಾವಣೆಯನ್ನು ನಡೆಸಿ ಆಯ್ಕೆಯಾದ ಶಾಲಾ ಸಂಸತ್ತಿನ ಮಂತ್ರಿಗಳಿಗೆ ಪ್ರಮಾಣ ವಚನ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕ ಸೋಮಯ್ಯ ವಹಿಸಿದ್ದರು
ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ದೇವತಾ ಸಮಿತಿಯ ಅಧ್ಯಕ್ಷ ರುದ್ರಪ್ಪ ಕಾರ್ಯದರ್ಶಿ ಮಹೇಶ್, ಕಾಲೇಜು ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಸಿ.ಎನ್. ಲೋಕೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ಕೃಷ್ಣ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಲೋಕೇಶ್, ಶಿಕ್ಷಕರಾದ ಶೈಲಜಾ, ರಮ್ಯಾ, ಸೌಮ್ಯ ಮೊದಲಾದವರು ವೇದಿಕೆಯಲ್ಲಿದ್ದರು.