ನಾಪೆÉÇೀಕ್ಲು, ಜು. 14: ನಾಪೆÇೀಕ್ಲು ಕೊಡವ ಸಮಾಜದಲ್ಲಿ ನಡೆಯುವ ಮದುವೆ ಸಮಾರಂಭದಲ್ಲಿ ಇನ್ನು ಮುಂದೆ ಗಂಗಾ ಪೂಜೆ ಸಂದರ್ಭ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುವ ನಿರ್ಣಯವನ್ನು ಅಂಗೀಕರಿಸಲಾಯಿತು. ಇದನ್ನು ಉಲ್ಲಂಘಿಸಿದರೆ ರೂ. 50 ಸಾವಿರ ದಂಡವನ್ನು ವಿಧಿಸಲು ನಿರ್ಧರಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದರು.

ಮೊದಲು ಅಮ್ಮತ್ತಿ ಕೊಡವ ಸಮಾಜ ಮತ್ತು ಬೆಂಗಳೂರು ಕೊಡವ ಸಮಾಜ ಈ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಕೊಡವ ಸಮಾಜಗಳು ಇದನ್ನು ಕಾರ್ಯರೂಪಕ್ಕೆ ತರುವಂತೆ ಅವರು ಮನವಿ ಮಾಡಿದರು.

ಈ ಸಂದರ್ಭ ಕೊಡವ ಸಮಾಜದ ಉಪಾಧ್ಯಕ್ಷ ಮಾಳೆಯಂಡ ಅಯ್ಯಪ್ಪ, ಪ್ರಧಾನ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ, ಸಹ ಕಾರ್ಯದರ್ಶಿ ಮಾಚೆಟ್ಟಿರ ಕುಶು ಕುಶಾಲಪ್ಪ, ಖಜಾಂಚಿ ಅಪ್ಪಾರಂಡ ಸುಧೀರ್ ಅಯ್ಯಪ್ಪ, ಮತ್ತು ಕೊಡವ ಸಮಾಜದ ಸಮಿತಿ ಸದಸ್ಯರು ಇದ್ದರು.