ವೀರಾಜಪೇಟೆ, ಜು. 14: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊನ್ನಂಪೇಟೆ ತಾಲೂಕು ಪಂಚಾಯತ್ ಮತ್ತು ಕ್ಲೀನ್ ಕೂರ್ಗ್ ಇನಿಷಿಯೇಟಿವ್ ವತಿಯಿಂದ ಪೊನ್ನಂಪೇಟೆಯ ಪದವಿ ಪೂರ್ವ ಕಾಲೇಜಿನಲ್ಲಿ ಪರಿವರ್ತನ ಮೇಳ ನಡೆಯಿತು. ಈ ಕಾರ್ಯಕ್ರಮದಲ್ಲಿ ಮೂರ್ನಾಡಿನ ಮಾರುತಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಡುವಂಡ ಅರುಣ್ ಅಪ್ಪಚ್ಚು ಮತ್ತು ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಸ್ಥೆಯ ವತಿಯಿಂದ ಇವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಪೊನ್ನಂಪೇಟೆಯಲ್ಲಿ ಆಯೋಜಿಸಲಾಗಿದ್ದ ವಸ್ತುಪ್ರದರ್ಶನ ಮತ್ತು ಮಾದರಿಗಳನ್ನು ವೀಕ್ಷಿಸಿದ ಸಂಸ್ಥೆಯ ‘ಇಕೊಕ್ಲಬ್’ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಮುಕ್ತ ದೇಶದ ಪರಿಕಲ್ಪನೆಯ ಸಂಕಲ್ಪದೊಂದಿಗೆ ಭಾಗವಹಿಸಿದ್ದರು.