ಗೋಣಿಕೊಪ್ಪಲು, ಜು. 14: ಗೋಣಿಕೊಪ್ಪಲು ಲಯನ್ಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ ಇತ್ತೀಚೆಗೆ ನೆರವೇರಿತು. ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಎ.ಬಿ. ಅಕ್ಕಮ್ಮ ಪ್ರಮಾಣವಚನ ಭೋದಿಸಿದರು.

ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಸಿ.ಎಂ. ಅಪ್ಪಣ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಹಿತವಚನ ನುಡಿದರು. ಸಂಸ್ಥೆಯ ಉಪಾಧ್ಯಕ್ಷ ಚಂಗಪ್ಪ, ಕಾರ್ಯದರ್ಶಿ ಪೆಮ್ಮಯ್ಯ, ಖಜಾಂಚಿ ಧನು ಉತ್ತಯ್ಯ, ಲಯನ್ಸ್ ಕ್ಲಬ್ ಅಧ್ಯಕ್ಷ ನೀತಿ ಪೂಣಚ್ಚ, ಸಮೂಹ ಶಾಲೆಗಳ ಮುಖ್ಯಶಿಕ್ಷಕರು ಉಪಸ್ಥಿತರಿದ್ದರು.