ಮಡಿಕೇರಿ, ಜು. 15: 2019-20ನೇ ಸಾಲಿನ ತಾಲೂಕಿನ ಸರಕಾರಿ / ಅನುದಾನಿತ / ಅನುದಾನ ರಹಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಕ್ರೀಡಾ ಚಟುವಟಿಕೆಗಳ ಬಗ್ಗೆ ವಾರ್ಷಿಕ ಸಭೆಯನ್ನು ತಾ. 16ರಂದು (ಇಂದು) ಪೂರ್ವಾಹ್ನ 10.30 ಗಂಟೆಗೆ ನಗರದ ಸಂತ ಜೋಸೆಫರ ಬಾಲಕಿಯರ ಪ್ರೌಢಶಾಲೆಯಲ್ಲಿ ಕರೆಯಲಾಗಿದೆ. ಸಭೆಗೆ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಕಡ್ಡಾಯವಾಗಿ ಕಳುಹಿಸಬೇಕು. ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದ ಶಾಲೆಗಳಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಜರಾಗಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆ ತಿಳಿಸಿದೆ.