ಮಡಿಕೇರಿ, ಜು. 15: ರಾಜ್ಯದಲ್ಲಿ ಉದ್ಭವಿಸಿರುವ ರಾಜಕೀಯ ಅನಿಶ್ಚಿತತೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದ್ದು, ಇದಕ್ಕೆ ಬಿಜೆಪಿಯ ಅಧಿಕಾರ ದಾಹವೇ ಕಾರಣವೆಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎ.ಕೆ. ಹ್ಯಾರಿಸ್, ರಾಜ್ಯದ ಅಭಿವೃದ್ಧಿ ಮತ್ತು ಜನಹಿತ ಕಾಯುವ ಕಾಳಜಿ ಇದ್ದರೆ ಬಿಜೆಪಿ ನಾಯಕರು ಆಪರೇಷನ್ ಕಮಲ ಕಾರ್ಯಾಚರಣೆಯನ್ನು ಕೈಬಿಡಲಿ ಎಂದು ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತಿಕೂಟದ ಸರಕಾರ ಉತ್ತಮ ರೀತಿಯಲ್ಲಿ ಆಡಳಿತ ನೀಡುತ್ತಿರುವದನ್ನು ಸಹಿಸದ ಬಿಜೆಪಿ ನಾಯಕರು ರಾಜಕೀಯ ಕ್ಷೇತ್ರವನ್ನು ಕಲುಷಿತಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.