ಕಚೇರಿಗೆ ಮಾಹಿತಿ ಒದಗಿಸಲು ಕೋರಲಾಗಿತ್ತು. ಆದರೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪಠ್ಯ ಪುಸ್ತಕ ಸಂಘಕ್ಕೆ ಯಾವದೇ ಮಾಹಿತಿ ತಲಪಿಲ್ಲ ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ನರಸಿಂಹಯ್ಯ ತಿಳಿಸಿದ್ದಾರೆ. ಮಾತ್ರವಲ್ಲದೇ ಕೂಡಲೇ ಮಾಹಿತಿಯನ್ನು ಒದಗಿಸುವಂತೆಯೂ ನರಸಿಂಹಯ್ಯ ಸೂಚಿಸಿದ್ದಾರೆ. ಆದ್ದರಿಂದ ಈ ಬಗ್ಗೆ ಸಂಬಂಧಪಟ್ಟವರು ಶೀಘ್ರವೇ ಎಲ್ಲಾ ಮಾಹಿತಿಯನ್ನು ಸಂಘಕ್ಕೆ ಒದಗಿಸಿಕೊಡಬೇಕೆಂದು ಪೆಮ್ಮಂಡ ಕೆ ಪೊನ್ನಪ್ಪ ಮನವಿ ಮಾಡಿದ್ದಾರೆ.

ಇದರೊಂದಿಗೆ ತೃತೀಯ ಭಾಷೆಯಾಗಿ ಕೊಡವ ಭಾಷೆಯನ್ನು ಆಯ್ಕೆಮಾಡಿಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳಿದ್ದರೆ, ಅಂತಹ ವಿದ್ಯಾರ್ಥಿಗಳು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಕಚೇರಿಯನ್ನು ಸಂಪರ್ಕಿಸಬಹುದೆಂದು ಅಕಾಡೆಮಿಯ ಅಧ್ಯಕ್ಷರು ಹಾಗೂ ಸದಸ್ಯರು ಕೋರಿದ್ದಾರೆ.