ಮಡಿಕೇರಿ, ಜು. 16: ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮನೋರಂಜನಾ ಸಂಘದ ಅಧ್ಯಕ್ಷರಾಗಿ ಎಂ.ಎಸ್. ದಿವ್ಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಎಂ.ಎಸ್. ಗಣೇಶ್ ಆಯ್ಕೆಯಾಗಿದ್ದಾರೆ.

ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಯುವಕ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಕಾರ್ಯದರ್ಶಿಯಾಗಿ ಆದರ್ಶ್ ಅದ್ಕಲೇಗಾರ್, ಸಹ ಕಾರ್ಯದರ್ಶಿಯಾಗಿ ಮೋಹನ್ ಕುಮಾರ್, ಖಂಜಾಚಿಯಾಗಿ ಎಂ.ಎಸ್. ಸಂಪತ್ ಆಯ್ಕೆಯಾದರು.

ಸ್ವಾತಂತ್ರ್ಯ ದಿನಾಚರಣೆ: ಆ. 15 ರಂದು ಸಂಘದ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಹಾಗೂ ಸಂಘದ ಮಾಸಿಕ ಸಭೆ ಆಯೋಜಿಸಲಾಗಿದೆ. ಜನಾಂಗ ಬಾಂಧವರು ಪಾಲ್ಗೊಳ್ಳಬೇಕು ಎಂದು ಅಧ್ಯಕ್ಷರು ಮನವಿ ಮಾಡಿದರು. ಸಭೆಯಲ್ಲಿ ಸ್ಥಾಪಕಾಧ್ಯಕ್ಷ ವಾಮನ ನಾಯಕ್, ಸಂಘದ ಉಪಾಧ್ಯಕ್ಷೆ ದೇವಕ್ಕಿ ಜಿ.ಆರ್. ನಾಯ್ಕ್, ಕಾರ್ಯದರ್ಶಿ ಪವನ್ ಕುಮಾರ್, ಸಹ ಕಾರ್ಯದರ್ಶಿ ಮೋಹನ್ ಕುಮಾರ್, ಅಂಭಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷ ಎಂ.ಎಸ್. ದಿವ್ಯಕುಮಾರ್, ಕಟ್ಟಡ ಸಮಿತಿ ಕಾರ್ಯದರ್ಶಿ ಎಂ.ಎಸ್. ಯೋಗೇಂದ್ರ, ಕೋಶಾಧಿಕಾರಿ ಕಾಂತಿ ಯೋಗೇಂದ್ರ, ಪ್ರಮುಖರಾದ ಕುಮಾರ, ನರಸಿಂಹ, ಯುವ ವೇದಿಕೆ ಸದಸ್ಯರಾದ ಎಂ.ಟಿ. ನವೀನ್ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.