ಮಡಿಕೇರಿ, ಜು. 16: ಕಳೆದ ಆಗಸ್ಟ್ ತಿಂಗಳಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಣ ಕಳೆದುಕೊಂಡ ಕುಟುಂಬದ ಸದಸ್ಯರಿಗೆ ಚೇರಂಬಾಣೆ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ತಲಾ ರೂ. 5000 ಚೆಕ್ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಬೆಳ್ಯನ ಚಂದ್ರಪ್ರಕಾಶ್, ಕಾರ್ಯದರ್ಶಿ ಹೆಚ್.ಕೆ. ಚಂದ್ರಶೇಖರ್, ಸಹ ಕಾರ್ಯದರ್ಶಿ ಎ.ಜಿ. ಉದಯ ಕುಮಾರ್ ಹಾಗೂ ಸಂಘದ ಸದಸ್ಯರು ಹಾಜರಿದ್ದರು.