ಮಡಿಕೇರಿ, ಜು. 16: ಜಿಲ್ಲೆಯಲ್ಲಿ ಮುಂಗಾರು ಮಳೆಯು ಕ್ಷೀಣಿಸಲಿದ್ದು, ತಾ. 19 ರಿಂದ ಚುರುಕುಗೊಳ್ಳುವ ನಿರೀಕ್ಷೆ ಇದೆ ಎಂದು ಹವಾಮಾನ ಮುನ್ಸೂಚನಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಈಗಿನ ವೀಕ್ಷಣೆಯಂತೆ ಮುಂಗಾರು ಮಳೆಯು ತಾ. 19ರ ಬದಲಾಗಿ 17 ರಿಂದ ಚುರುಕುಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24x7 ಕಂಟ್ರೋಲ್ ರೂಂ. 08272-221077, ವಾಟ್ಸ್ಪ್ ನಂ. 8550001077 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.