ಗೋಣಿಕೊಪ್ಪಲು. ಜು. 16: ಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಗೂರು ಹಾಗೂ ಚೀನಿವಾಡ ಗ್ರಾಮದಲ್ಲಿ ಕಾಡಾನೆಗಳು ಬೀಡುಬಿಟ್ಟಿದ್ದು, ಇವುಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ತಾ. 17ರಂದು (ಇಂದು) ಬೆಳಿಗ್ಗೆಯಿಂದ ನಡೆಯಲಿದೆ.
ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ರೈತರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು ಹಾಗೂ ಅರಣ್ಯ ಇಲಾಖೆಗೆ ಸಹಕಾರ ನೀಡಬೇಕೆಂದು ಪೊನ್ನಂಪೇಟೆ ಅರಣ್ಯ ಇಲಾಖೆಯ ಆರ್.ಎಫ್.ಓ. ಗಂಗಾಧರ್ ಕೋರಿದ್ದಾರೆ.