ಮಡಿಕೇರಿ, ಜು. 16: ಕೊಡಗು ಪ್ರೆಸ್ ಕ್ಲಬ್ ನೂತನ ನಿರ್ದೇಶಕರಾಗಿ ಸೋಮವಾರಪೇಟೆ ಸಂಯುಕ್ತ ಕರ್ನಾಟಕ ವರದಿಗಾರ ಎಸ್.ಡಿ. ವಿಜೇತ್ ನೇಮಕಗೊಂಡಿದ್ದಾರೆಂದು ಪ್ರಧಾನ ಕಾರ್ಯದರ್ಶಿ ಆರ್. ಸುಬ್ರಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಖಾಲಿ ಇದ್ದ ಒಂದು ಸ್ಥಾನಕ್ಕೆ ನೇಮಕ ಮಾಡಲಾಗಿದೆ. ವಿಜೇತ್ ಸೋಮವಾರ ಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ತಾ. 27 ರಂದು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಸಹಯೋಗ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಖಜಾಂಚಿ ರೆಜಿತ್‍ಕುಮಾರ್ ಗುಹ್ಯ, ಸಂಘಟನಾ ಕಾರ್ಯದರ್ಶಿ ಎಂ.ಎ. ಅಜೀಜ್, ಸಹ ಕಾರ್ಯದರ್ಶಿ ನಾಗರಾಜ ಶೆಟ್ಟಿ, ನಿರ್ದೇಶಕರಾದ ಎಸ್.ಎಂ. ಮುಬಾರಕ್, ಬಿ.ಆರ್. ಸವಿತಾ ರೈ, ಚೀಯಂಡಿ ತೇಜಸ್ ಪಾಪಯ್ಯ, ಕಿಶೋರ್ ರೈ ಕತ್ತಲೆಕಾಡು, ಎಂ.ಎನ್. ನಾಸಿರ್, ಡಿ.ಪಿ. ರಾಜೇಶ್, ಕುಪ್ಪಂಡ ದತ್ತಾತ್ರಿ ಇದ್ದರು.