ಮಡಿಕೇರಿ, ಜು. 16: 2019-20ನೇ ಸಾಲಿಗೆ ಕಿರುಸಾಲ ಯೋಜನೆಯಡಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸ್ತ್ರೀಶಕ್ತಿ ಸ್ವ-ಸಹಾಯ ಗುಂಪಿನ ಸದಸ್ಯರುಗಳಿಗೆ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರತಿ ಗುಂಪಿಗೆ ರೂ. 2 ಲಕ್ಷ ಬಡ್ಡಿ ರಹಿತ ಸಾಲ ನೀಡಲಾಗುವದು. ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ/ ಉಪ ನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚೈನ್‍ಗೇಟ್, ಮೈಸೂರು ರಸ್ತೆ ಮಡಿಕೇರಿ ದೂರವಾಣಿ ಸಂಖ್ಯೆ 08272-298379, 7996368687, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ರೇಸ್ ಕೋರ್ಸ್ ರಸ್ತೆ ಹೊಸ ಬಡಾವಣೆ ಮಡಿಕೇರಿ, ದೂರವಾಣಿ ಸಂಖ್ಯೆ 08272-228197, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ತಾಲೂಕು ಸ್ತ್ರೀಶಕ್ತಿ ಭವನ, ತಾಲೂಕು ಪಂಚಾಯಿತಿ ಆವರಣ ಸೋಮವಾರಪೇಟೆ ದೂರವಾಣಿ ಸಂಖ್ಯೆ 08276-282281, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಸ್ತ್ರೀ ಶಕ್ತಿ ಮಾರುಕಟ್ಟೆ ಸಂಕೀರ್ಣ ಕಟ್ಟಡ ಉಪ ನೋಂದಾಣಾಧಿಕಾರಿ ಕಚೇರಿಯ ಎದುರು ಪೊನ್ನಂಪೇಟೆ ದೂರವಾಣಿ ಸಂಖ್ಯೆ 08274-249010ನ್ನು ಸಂಪರ್ಕಿಸಲು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸಾಲ ಸೌಲಭ್ಯಕ್ಕೆ

ಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿ ಕೈಗಾರಿಕೆ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ ತುಂಬಿದ ಅರ್ಹ ಅಭ್ಯರ್ಥಿಗಳು ತಿತಿತಿ.ಞviಛಿ.oಡಿg.iಟಿ (ಠಿmegಠಿ oಟಿಟiಟಿe ಚಿಠಿಠಿಟiಛಿಚಿಣioಟಿ) ನಲ್ಲಿ ಅರ್ಜಿ ಅಳವಡಿಸಿ ಅದರ ಪ್ರತಿಯನ್ನು 2 ಸೆಟ್‍ನಲ್ಲಿ ದಾಖಲಾತಿ ಈ ಕಚೇರಿಗೆ ಸಲ್ಲಿಸುವದು. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಕಚೇರಿ ಸಂಪರ್ಕಿಸುವದು. ದೂರವಾಣಿ ಸಂಖ್ಯೆ: 08272-228431. ಅರ್ಜಿ ಸಲ್ಲಿಸಲು ತಾ. 31 ಕೊನೆ ದಿನವಾಗಿದೆ.

ಪ್ರೋತ್ಸ್ಸಾಹ ಧನಕ್ಕೆ

ಆರ್ಥಿಕ ಹಿಂದುಳಿದ ಸಣ್ಣ ವ್ಯಾಪಾರ ನಡೆಸುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ ಮಹಿಳಾ ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ ರೂ. 10 ಸಾವಿರ ಪ್ರೋತ್ಸಾಹ ಧನ ನೀಡಲಾಗುವದು. ಅರ್ಜಿ ಪಡೆಯಲು ಆಗಸ್ಟ್ 15 ಕೊನೆ ದಿನವಾಗಿದೆ.

ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕೊಡಗು ಜಿಲ್ಲಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ ಮಡಿಕೇರಿ, ದೂರವಾಣಿ ಸಂಖ್ಯೆ 08272-298379, 7996368687 ಸಂಪರ್ಕಿಸಬಹುದಾಗಿದೆ.