ಮಡಿಕೇರಿ, ಜು. 17: ಬಿಕ್ಷುಕನೋರ್ವನಿಗೆ ಡಿಕ್ಕಿಪಡಿಸಿ ಆತನ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಆರೋಪಿಯನ್ನು ಕಾರು ಸಹಿತ ಜಿಲ್ಲಾ ಅಪರಾಧ ಪತ್ತೆದಳ ಬಂಧಿಸಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೂರ್ನಾಡುವಿನ ಮುಖ್ಯ ರಸ್ತೆಯಲ್ಲಿ ತಾ. 11 ರಂದು ರಾತ್ರಿ ಬಿಕ್ಷುಕನೋರ್ವನಿಗೆ ಡಿಕ್ಕಿಪಡಿಸಿ ಆತನ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಬಲಮುರಿಯ ಪಿ.ಪಿ. ಮುತ್ತಣ್ಣ ಎಂಬಾತನನ್ನು ಬಂಧಿಸಲಾಗಿದೆ. ಕಾರು (ಕೆಎ 05 ಎನ್ 1910)ನ್ನು ವಶಪಡಿಸಿಕೊಳ್ಳಲಾಗಿದೆ.
ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಸುಮನ್ ಅವರ ಮಾರ್ಗದರ್ಶನದಲ್ಲಿ ಅಪರಾಧ ಪತ್ತೆ ದಳದ ಪೊಲೀಸ್ ನಿರೀಕ್ಷಕ ಎಂ. ಮಹೇಶ್, ಎಎಸ್‍ಐ ಹಮೀದ್, ಸಿಬ್ಬಂದಿಗಳಾದ ವಿ.ಜಿ. ವೆಂಕಟೇಶ್, ಕೆಎಸ್. ಅನಿಲ್‍ಕುಮಾರ್, ಎಂ.ಎನ್. ನಿರಂಜನ್, ಬಿ.ಎಲ್. ಯೋಗೇಶ್‍ಕುಮಾರ್, ಕೆ.ಆರ್. ವಸಂತ, ಕೆ.ಎಸ್. ಶಶಿಕುಮಾರ್, ರಾಜೇಶ್ ಮತ್ತು ಗಿರೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಪ್ರಕರಣವನ್ನು ಪತ್ತೆ ಹಚ್ಚಿದ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ಶ್ಲಾಘಿಸಿ ಪೊಲೀಸ್ ಅಧೀಕ್ಷಕರು ನಗದು ಬಹುಮಾನವನ್ನು ಘೋಷಿಸಿದ್ದಾರೆ.