ಮಡಿಕೇರಿ, ಜು. 17: ಕಂದಾಯ ಇಲಾಖೆಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಪದವೀಧರರಾಗಿರುವ ನಿವೃತ್ತ ವಿಶೇಷ ಜಿಲ್ಲಾಧಿಕಾರಿ, ನಿವೃತ್ತ ತಹಶೀಲ್ದಾರ್, ನಿವೃತ್ತ ಉಪ ತಹಶೀಲ್ದಾರ್, ನಿವೃತ್ತ ಸಿವಿಲ್ ನ್ಯಾಯಾಧೀಶರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಸರ್ಕಾರದ ನಿಯಮಾವಳಿಗಳಂತೆ ಸಂಚಿತ ವೇತನ ಪಾವತಿಸಲಾಗುವದು. ಆಸಕ್ತಿಯುಳ್ಳವರು ತಮ್ಮ ಸ್ವವಿವರಗಳನ್ನೊಳಗೊಂಡ ಪೂರ್ಣ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳು, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ತಾ. 25 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ ಇಲ್ಲಿ ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಬಹುದು.