ಕೂಡಿಗೆ, ಜು. 17: ತೊರೆನೂರು ಗ್ರಾಮದಲ್ಲಿ ಜನರು ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ರಂಜನ್ ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾ ಕುಟುಂಬ ಮತ್ತು ಕಲ್ಯಾಣ ಇಲಾಖೆಯ ಆರೋಗ್ಯಾಧಿಕಾರಿ, ಜಿಲ್ಲಾ ವೈದ್ಯಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳು ತೊರೆನೂರಿಗೆ ಭೇಟಿ ನೀಡಿ ರೋಗಿಗಳನ್ನು ತಪಾಸಣೆ ನಡೆಸಿದರು. ಚಿಕಿತ್ಸೆ ನೀಡಿ, ಜ್ವರ ಇರುವವರ ರಕ್ತವನ್ನು ಸ್ಥಳದಲ್ಲಿಯೇ ಪಡೆದು ಪರೀಕ್ಷಿಸಿದರು.

ಈ ಸಂದರ್ಭ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ವೈದ್ಯಾಧಿಕಾರಿ ಡಾ. ಆನಂದ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಆರೋಗ್ಯ ಸಹಾಯಕರು ಇದ್ದರು.