ಮಡಿಕೇರಿ, ಜು. 17: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2019-20ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗುರು-ಶಿಷ್ಯ ಪರಂಪರೆ ಯೋಜನೆಯಡಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ ಮತ್ತು ಗಮಕ ಕಲಾಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ, ಅಭ್ಯಾಸ ಮಾಡುತ್ತಿರುವ ಹೆಚ್ಚಿನ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ 3 ತಿಂಗಳವರೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. 30 ಕೊನೆಯ ದಿನವಾಗಿದೆ. 14 ರಿಂದ 26 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಅಕಾಡೆಮಿಯ ಕಚೇರಿ ವೇಳೆಯಲ್ಲಿ ಅಲ್ಲದೇ ಅಕಾಡೆಮಿ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞsಚಿಟಿgeeಣಚಿಟಿಡಿiಣಥಿಚಿಚಿಛಿಚಿಜemಥಿ.ಛಿom ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ ಬೆಂಗಳೂರು-560002 ಇಲ್ಲಿಗೆ ಕಳುಹಿಸಿ ಕೊಡುವಂತೆ ತಿಳಿಸಲಾಗಿದೆ.