ಸುಂಟಿಕೊಪ್ಪ, ಜು.17: ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಮೇದಪ್ಪ ಅವರು ವರ್ಗಾವಣೆಯಾಗಿದ್ದು, ತೆರವಾದ ಸ್ಥಾನಕ್ಕೆ ಕಾಂತೂರು ಮೂರ್ನಾಡು ಗ್ರಾ.ಪಂ.ನಲ್ಲಿ ಪಿಡಿಓ ಆಗಿದ್ದ ವೇಣುಗೋಪಾಲ್ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ಮಾದಾಪುರ ಗ್ರಾಮ ಪಂಚಾಯಿತಿ ನೂತನ ಪಿಡಿಓ ಆಗಿ ಟಿ.ಎಸ್. ಪೂರ್ಣಕುಮಾರ್ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಅವರು ಕಿರಗಂದೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.