ನವದೆಹಲಿ, ಜು.17: ಕರ್ನಾಟಕದ 15 ಅತೃಪ್ತ ಶಾಸಕರ ಅರ್ಜಿಯ ಪರ ವಿರೋಧÀ ವಾದ ಆಲಿಸಿದ್ದ ಸುಪ್ರೀಂಕೋರ್ಟ್ ಇಂದು ನೈಪುಣ್ಯದ ತೀರ್ಪು ನೀಡಿದೆ. ಇತ್ತ ಅತೃಪ್ತ ಶಾಸಕರಿಗೂ ಅತೃಪ್ತಿಯಾಗದಂತೆ, ಅತ್ತ ವಿಧಾನಸಭಾಧ್ಯಕ್ಷರ ಗಮನÀಕ್ಕೂ ಧಕ್ಕೆಯಾಗದಂತಹ ಅಪೂರ್ವ ಮಧ್ಯಂತರ ತೀರ್ಪನ್ನು ನೀಡಿದೆ. ಅತೃಪ್ತ ಶಾಸಕರ ಅರ್ಜಿ ಬಗ್ಗೆ ಪ್ರಕಟಿಸಿದ್ದು, ನಿರ್ದಿಷ್ಟ ಸಮಯದಲ್ಲಿ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ನಿನ್ನೆ ಅತೃಪ್ತ ಶಾಸಕರ ಪರ-ವಿರೋಧ ವಾದಗಳನ್ನು ಆಲಿಸಿದ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್ ಅವರನ್ನೊಳಗೊಂಡ ಪೀಠ ಈ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ತಾನು ಮಧ್ಯಸ್ಥಿಕೆ ವಹಿಸುವದಿಲ್ಲವೆಂದು ಹೇಳಿರುವ ನ್ಯಾಯಾಲಯ ಸ್ಪೀಕರ್ ಹುದ್ದೆಯ ಘನತೆ ಎತ್ತಿ ಹಿಡಿದಿದೆ.
ಸುಪ್ರೀಂ ಕೋರ್ಟ್‍ನ ಈ ತೀರ್ಪಿನಿಂದಾಗಿ ಅತೃಪ್ತ ಶಾಸಕರು ನಿಟ್ಟುಸಿರು ಬಿಡುವಂತಾಗಿದೆ. ರಾಜೀನಾಮೆ ನೀಡಿರುವ 15 ಶಾಸಕರನ್ನು ವಿಧಾನಸಭೆಗೆ ಹಾಜರಾಗಬೇಕೆಂದು ಒತ್ತಾಯ ಮಾಡುವಂತಿಲ್ಲ ಎಂದು ಹೇಳಿದೆ. ಈ ಮೂಲಕ ಶಾಸಕರಿಗೆ ನೀಡಿದ ವಿಪ್‍ಗೆ ಮಾನ್ಯತೆ ಇರುವದಿಲ್ಲ.
ಗುರುವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸ ಮತಯಾಚನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸದನಕ್ಕೆ ಬರುವಂತೆ ಒತ್ತಡ ಹಾಕುವಂತಿಲ್ಲ, ಎಲ್ಲರೂ ಸಂವಿಧಾನವನ್ನು ಕಾಪಾಡಬೇಕು ಎಂದು ಹೇಳಿರುವ ಸುಪ್ರೀಂಕೋರ್ಟ್, ಸದನಕ್ಕೆ ಹಾಜರಾಗುವದು ಶಾಸಕರ ವಿವೇಚನೆಗೆ ಬಿಟ್ಟ ವಿಷಯ ಎಂದು ಹೇಳಿದೆ.