ಮಡಿಕೇರಿ, ಜು. 17: ಕಾರ್ಮಿಕ ಅಧಿಕಾರಿ ಎಂ.ಹೆಚ್. ರಾಮಕೃಷ್ಣ ಕೊಡಗು ಜಿಲ್ಲೆಯಿಂದ ಹಾಸನ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ. ಇವರಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು.
ಕಾರ್ಯಕ್ರಮದಲ್ಲಿ ಎಂ.ಎಂ. ಯತ್ನಟಿ, ಪ್ರಭಾರ ಕಾರ್ಮಿಕ ಅಧಿಕಾರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕ ಮಹದೇವಸ್ವಾಮಿ, ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು ಮತ್ತು ಆರ್. ಶೀರಾಝ್ ಅಹ್ಮದ್ ಯೋಜನಾ ನಿರ್ದೇಶಕರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವರು ಭಾಗವಹಿಸಿದ್ದರು.