ಕೂಡಿಗೆ, ಜು. 17: ಬೈಕ್‍ನಲ್ಲಿ ಸೀಗೆಹೊಸೂರಿನಿಂದ ಕೂಡಿಗೆ ಕಡೆಗೆ ಬರುತ್ತಿದ್ದ ಸಂದರ್ಭ ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ಮಂಟಿರಾಜ್ ಎಂಬವರ ಪುತ್ರ ಶಿವಕುಮಾರ್ (45) ಮೃತ ದುರ್ದೈವಿ.
ಶಿವಕುಮಾರ್ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದ ಪರಿಣಾಮ ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗೆ ಸಾಗಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಶಿವಕುಮಾರ್ ಮತ್ತು ಅವರ ಪತ್ನಿ ಸೀಗೆಹೊಸೂರು ಮಾರ್ಗವಾಗಿ ಕೂಡಿಗೆಗೆ ಬರುವ ಸಂದರ್ಭ ಈ ಘಟನೆ ನಡೆದಿದೆ. ಅವರ ಪತ್ನಿಗೂ ಸಣ್ಣ ಪುಟ್ಟಗಾಯಗಳಾಗಿವೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.