ಮಡಿಕೇರಿ, ಜು. 17: ಗಾಳಿಬೀಡು ಜವಾಹರ ನವೋದಯ ವಿದ್ಯಾಲಯಕ್ಕೆ 2020-21ನೇ ಸಾಲಿನ ಶೈಕ್ಷಣಿಕ ಸಾಲಿಗೆ ಆರನೇ ತರಗತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಾಗುವದು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 2019-20 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿ ಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. 2020ರ ಜನವರಿ 11 ರಂದು ಪರೀಕ್ಷೆ ನಡೆಯಲಿದೆ ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.