ಮಡಿಕೇರಿ, ಜು. 17: ಮಾದಕ ವಸ್ತು ಸೇವನೆ ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆ ಸೇರಿದಂತೆ ಇತರ ಇಲಾಖೆಗಳ ವತಿಯಿಂದ ಅಲ್ಲಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ. ಆದರೆ ಇಲ್ಲಿ ವಿಶೇಷವಾಗಿ ಗ್ರಾಮ ಗಸ್ತು ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿಯೋರ್ವರು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಮಾದರಿಯಾಗಿದ್ದಾರೆ.

ಹಾಕತ್ತೂರು ಗ್ರಾಮ ವ್ಯಾಪ್ತಿಗೆ ಗ್ರಾಮಾಂತರ ಠಾಣೆಯಿಂದ ನಿಯೋಜನೆಗೊಂಡಿರುವ ಸಿಬ್ಬಂದಿ ರವಿ ಅವರು ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ತೊಂಭತ್ತುಮನೆ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ಅಕ್ರಮ ಚಟುವಟಿಕೆ, ಮಾದಕ ವಸ್ತುಗಳಿಂದ ದೂರವಿರುವಂತೆ ಲೈಂಗಿಕ ದೌರ್ಜನ್ಯದ ಬಗ್ಗೆ ಎಚ್ಚರವಹಿಸು ವಂತೆ, ರಸ್ತೆ ನಿಯಮಪಾಲನೆ ಬಗ್ಗೆ ಮಾಹಿತಿ ನೀಡಿದರು.

- ಪಿ.ಪಿ. ಸುಕುಮಾರ್