ಮಡಿಕೇರಿ, ಜು. 18: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2019-20ನೇ ಸಾಲಿನಲ್ಲಿ ಪತ್ರಿಕೋದ್ಯಮ ಮತ್ತು ಸಂವಹನ ತರಬೇತಿಗಾಗಿ ಪ್ರೋತ್ಸಾಹಧನ ನೀಡಲು ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಿ, ನಂತರ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ. 08272-225528/220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.