ಮಡಿಕೇರಿ, ಜು. 18: ಶಿವಶರಣ ಹಡಪದ ಅಪ್ಪಣ್ಣ ಸೇರಿದಂತೆ ಹಲವು ವಚನಕಾರರು ಸಮಾಜ ಸುಧಾರಣೆಗೆ ಶ್ರಮಿಸಿದ್ದು, ಹಡಪದ ಅಪ್ಪಣ್ಣ ಅವರ ವಚನ ತತ್ವ ಮತ್ತು ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಲಹೆ ಮಾಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು.
ಸರ್ಕಾರಿ ಕೆಲಸ ದೇವರ ಕೆಲಸವಾಗಿದ್ದು, ಕಾಯಕ ನಿಷ್ಠೆಯ ಬಗ್ಗೆ ಶರಣರು ಸಂದೇಶ ಸಾರಿದ್ದಾರೆ. ಆದ್ದರಿಂದ ವಚನಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಮಾತನಾಡಿ, ಹಡಪದ ಅಪ್ಪಣ್ಣ ಶ್ರೇಷ್ಠ ವಚನಕಾರರು ಆಗಿದ್ದರು.
ಇವರು 12ನೇ ಶತಮಾನದಲ್ಲಿ ಬಸವಣ್ಣರವರ ಅನುಭವ ಮಂಟಪದಲ್ಲಿ ನೆಚ್ಚಿನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.
ಜಿ.ಪಂ. ಸಿಇಓ ಕೆ. ಲಕ್ಷ್ಮಿಪ್ರಿಯ ಮಾತನಾಡಿ, ಭಾರತದಲ್ಲಿ ಹಲವಾರು ಶ್ರೇಷ್ಠ ಸಂತರು ಉತ್ತಮ ಮಾನವೀಯ ಮೌಲ್ಯವನ್ನು ತಿಳಿಸಿದ್ದಾರೆ. ಅವರ ಆದರ್ಶ ಜೀವನವನ್ನು ಜನರು ಅನುಕರಣೆ ಮಾಡುವ ಮೂಲಕ ಸಮಾಜದ ಏಳಿಗೆಗಾಗಿ ಶ್ರಮಿಸಬೇಕಾಗಿದೆ ಎಂದು ತಿಳಿಸಿದರು.
ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಹೆಚ್.ಎನ್. ವೆಂಕಟೇಶ್ ಮಾತನಾಡಿ, ಶಿವಶರಣ ಹಡಪದ ಅಪ್ಪಣ್ಣ ಅವರ ಜೀವನ ಚರಿತ್ರೆ ತಿಳಿದುಕೊಳ್ಳುವಂತಾ ಗಬೇಕು ಎಂದರು.
ಕಾರ್ಯಕ್ರಮದಲ್ಲಿ, ಸವಿತಾ ಸಮಾಜದ ಜಿಲ್ಲಾ ಪ್ರತಿನಿಧಿ ಪುಟ್ಟರಾಜು, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನಂದ, ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಸಹಾಯಕ ಕಾರ್ಯದರ್ಶಿ ಬಾಬು, ಲೋಕೋಪಯೋಗಿ ಇಲಾಖೆ ಇಇ ಇಬ್ರಾಹಿಂ, ಜಿಲ್ಲಾ ಐಟಿಡಿಪಿ ಇಲಾಖೆಯ ಅಧಿಕಾರಿ ಶಿವಕುಮಾರ್, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.
ಸತೀಶ್ ಮತ್ತು ಪಂಚಮ್ ಬೋಪಣ್ಣ ತಂಡದವರಿಂದ ವಚನ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ. ದರ್ಶನ ಸ್ವಾಗತಿಸಿ, ಹೆಚ್.ಜಿ. ಕುಮಾರ್ ನಿರೂಪಿಸಿ, ಮಣಜೂರು ಮಂಜುನಾಥ್ ವಂದಿಸಿದರು.