ಮಡಿಕೇರಿ, ಜು. 18: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯ ಹಳೆಯ ವಿದ್ಯಾರ್ಥಿ ಸಂಘದ ಸಂಬಂಧ ತಾ. 20ರಂದು ಬೆಳಿಗ್ಗೆ 11.30 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಕಾಲೇಜು ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ. ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಕಾಲೇಜಿನ ಎಲ್ಲಾ ಹಳೆಯ ವಿದ್ಯಾರ್ಥಿಗಳು ಸಭೆಗೆ ಆಗಮಿಸಿ ಸೂಕ್ತ ಸಲಹೆ, ಸಹಕಾರ ನೀಡುವಂತೆ ಹಳೆಯ ವಿದ್ಯಾರ್ಥಿ ಸಂಘದ ಸಂಚಾಲಕ ಡಾ.ದಯಾನಂದ ಕೆ.ಸಿ. ಕೋರಿದ್ದಾರೆ.