ನಾಪೋಕ್ಲು, ಜು. 18: ಪಟ್ಟಣದ ಆಟೋ ನಿಲ್ದಾಣದ ಬಳಿ ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿದ ವಾಹನ ಚಾಲಕರಿಗೆ ಸ್ಥಳೀಯ ಪೊಲೀಸರು ದಂಡ ವಿಧಿಸಿದರು. ಪಟ್ಟಣದಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಬೇಕಾಗಿದೆ ಎಂದು ನಾಗರಿಕರು ಒತ್ತಾಯಿಸಿದ್ದಾರೆ.