ಮಡಿಕೇರಿ, ಜು. 19: ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರೊಂದಿಗೆ ಸಂವಹನ ಸಭೆ ತಾ. 20 ರಂದು (ಇಂದು) ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ಉಪ ವಿಭಾಗಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮಡಿಕೇರಿ, ಗೋಣಿಕೊಪ್ಪಲು, ವೀರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.

ವಿದ್ಯುತ್ ಗ್ರಾಹಕರು ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.