ಮಡಿಕೇರಿ, ಜು. 19: ಕಳೆದ ಎರಡು ವರ್ಷಗಳಿಂದ ಜಿಲ್ಲಾ ಕಾರ್ಮಿಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಎಂ.ಹೆಚ್. ರಾಮಕೃಷ್ಣ ಅವರಿಗೆ ಕಾರ್ಮಿಕ ಇಲಾಖೆ ವತಿಯಿಂದ ಬೀಳ್ಕೊಡಲಾಯಿತು.

ಈ ಸಂದರ್ಭ ನೂತನ ಕಾರ್ಮಿಕ ಅಧಿಕಾರಿ ಎಂ.ಎಂ. ಯತ್ನಟ್ಟಿ, ಹಿರಿಯ ಕಾರ್ಮಿಕ ನಿರೀಕ್ಷಕ ಎಂ. ಮಹದೇವಸ್ವಾಮಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಆರ್. ಶೀರಾಝ್ ಅಹಮ್ಮದ್ ಇತರರು ಇದ್ದರು.