ಮಡಿಕೇರಿ, ಜು. 19: ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಗೆ ಕೊಡಗು-ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮುಖಾಂತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಇಂಫೋಸಿಸ್ ಸಂಸ್ಥೆಯಿಂದ ಆರು ಕಂಪ್ಯೂಟರ್‍ಗಳನ್ನು ಉಚಿತವಾಗಿ ನೀಡಿದ್ದಾರೆ. ಈ ಸಂದರ್ಭ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ಮತ್ತು ಕಾರ್ಯದರ್ಶಿ ಕೆ.ಡಿ. ಗಣೇಶ್ ಉದ್ಘಾಟಿಸಿದರು. ಈ ಸಂದರ್ಭ ಕೆ.ಸಿ. ಮಾದಪ್ಪ, ಮುಖ್ಯ ಶಿಕ್ಷಕಿ ಕವಿತಾ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.