ಸೋಮವಾರಪೇಟೆ, ಜು. 19: ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಸಿರಿಗೇರಿ ಯರಿಸ್ವಾಮಿ ಅವರು ರಚಿಸಿರುವ ‘ಶಿಲ್ಪ’ ಕೃತಿಯ ಬಿಡುಗಡೆ ಕಾರ್ಯಕ್ರಮ ತಾ. 21 ರಂದು ಪೂರ್ವಾಹ್ನ 10.30ಕ್ಕೆ ಇಲ್ಲಿನ ಪತ್ರಿಕಾಭವನದಲ್ಲಿ ನಡೆಯಲಿದೆ.
ಮುದ್ದಿನಕಟ್ಟೆ ಮಠಾಧೀಶರಾದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರಿನ ಕವಯತ್ರಿ ಡಾ. ಲತಾ ರಾಜಶೇಖರ್ ಅವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ರಾಜಶೇಖರ್, ಕೃತಿ ರಚನೆಕಾರ ಸಿರಿಗೇರಿ ಯರಿಸ್ವಾಮಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.