ಮಡಿಕೇರಿ ಜು.19: ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ವಿನಾಯಿತಿ/ಆದ್ಯತಾ ಪ್ರಕರಣಗಳಡಿ ಸ್ವೀಕೃತವಾಗಿರುವ ಅರ್ಜಿಗಳನ್ನು ಕರಡು ಅಂಗೀಕೃತ ಮತ್ತು ಕರಡು ತಿರಸ್ಕøತ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ತಾ. 23 ರೊಳಗೆ ಆಕ್ಷೇಪಣೆ ಸಲ್ಲಿಸುವ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ತಿಳಿಸಿದ್ದಾರೆ.