ಸೋಮವಾರಪೇಟೆ, ಜು.20: ನಗರ ಗೌಡ ಜನಾಂಗ ಒಕ್ಕೂಟದ ವಾರ್ಷಿಕ ಮಹಾಸಭೆ ತಾ.21ರಂದು (ಇಂದು) ಸ್ಥಳೀಯ ಒಕ್ಕಲಿಗರ ಸಂಘದ ಸಭಾಂಗಣದಲ್ಲಿ ಅಧ್ಯಕ್ಷ ಎಂ.ಎಂ. ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಒಕ್ಕೂಟದ ಕಾರ್ಯದರ್ಶಿ ಕಿರಣ್‍ಕುಮಾರ್ ತಿಳಿಸಿದ್ದಾರೆ.

2018-19ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ, ಸಂಘದ ಸದಸ್ಯರ ಮಕ್ಕಳಿಗೆ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುವದು. ವಾರ್ಷಿಕ ಮಹಾಸಭೆಗೂ ಮೊದಲು ಬೆಳಿಗ್ಗೆ 9.30ಕ್ಕೆ ಸಂಘದ ಸದಸ್ಯರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ. ವಾರ್ಷಿಕ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿ ರಚನೆಯ ಬಗ್ಗೆ ಚರ್ಚೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಘದ ಸದಸ್ಯ ಉದ್ಯಮಿ ಹಾಗೂ ದಾನಿ ಹರಪಳ್ಳಿ ರವೀಂದ್ರ ಅವರನ್ನು ಸನ್ಮಾನಿಸಲಾಗುವದು ಎಂದು ಮಾಹಿತಿ ನೀಡಿದ್ದಾರೆ.