ಮಡಿಕೆರಿ, ಜು. 20: ಕರ್ನಾಟಕ ಬೆಳೆಗಾರರ ಒಕ್ಕೂಟದ ಪದಾಧಿಕಾರಿಗಳು ದೆಹಲಿಗೆ ಭೇಟಿ ನೀಡಿ, ಕೇಂದ್ರ ವಾಣಿಜ್ಯ ಸಚಿವರು, ವಿತ್ತ ಸಚಿವರು ಹಾಗೂ ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ ಅನ್ವಯ ಕಾಫಿ ಮಂಡಳಿಯಿಂದ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಸಂಬಂಧ ದಾಖಲೆ ಸಹಿತವಾಗಿ ಒದಗಿಸಿದ್ದಾರೆ. ಆ ಮೇರೆಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಒಕ್ಕೂಟದ ಅಧ್ಯಕ್ಷ ಯು.ಎಂ. ತೀರ್ಥಮಲ್ಲೇಶ್ ಅವರಿಗೆ ಕರೆ ಮಾಡಿ, ತಾ. 23 ರಂದು ಸಂಜೆ 4 ಗಂಟೆಗೆ ದೆಹಲಿಯ ಪಾರ್ಲಿಮೆಂಟ್ ಭವನದಲ್ಲಿ ಸಭೆಯನ್ನು ಕರೆದಿರುವದಾಗಿ ಮತ್ತು ಒಕ್ಕೂಟವು ಪಾಲ್ಗೊಳ್ಳಬೇಕೆಂದು ಆಹ್ವಾನಿಸಿದ್ದಾರೆ.

ಈ ಸಭೆಯಲ್ಲಿ ಕಾಫಿ ಮಂಡಳಿ ಅಧ್ಯಕ್ಷರು, ಸಂಸದರುಗಳು ಹಾಗೂ ಬೆಳೆಗಾರ ಸಂಘಟನೆ ಪಾಲ್ಗೊಳ್ಳಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.